
ಬೆಂಗಳೂರು: ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕರಡಿ ಸಂಗಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಸಂಸದ ಸ್ಥಾನಕ್ಕೂ ಕೂಡ ಅವರು ರಾಜೀನಾಮೆ ನೀಡಿದ್ದಾರೆ. ಇ-ಮೇಲ್ ಮೂಲಕ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಮ್ಮ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ.
ನಾಳೆ ಕರಡಿ ಸಂಗಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಕೊಪ್ಪಳದಿಂದ ಬೆಂಗಳೂರಿಗೆ ಆಗಮಿಸಿರುವ ಸಂಗಣ್ಣ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ. ಕೊಪ್ಪಳದಿಂದ ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿದ್ದರು. ಈ ಬಾರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದರು.