alex Certify ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಕಮಲ ಪಕ್ಷಕ್ಕೆ ಗುಡ್ ಬೈ ಹೇಳಿದ ಕೊಪ್ಪಳ ಸಂಸದ ಸಂಗಣ್ಣ ಕರಡಿ, ನಾಳೆ ಕಾಂಗ್ರೆಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಕಮಲ ಪಕ್ಷಕ್ಕೆ ಗುಡ್ ಬೈ ಹೇಳಿದ ಕೊಪ್ಪಳ ಸಂಸದ ಸಂಗಣ್ಣ ಕರಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕರಡಿ ಸಂಗಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಸಂಸದ ಸ್ಥಾನಕ್ಕೂ ಕೂಡ ಅವರು ರಾಜೀನಾಮೆ ನೀಡಿದ್ದಾರೆ. ಇ-ಮೇಲ್ ಮೂಲಕ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಮ್ಮ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ.

ನಾಳೆ ಕರಡಿ ಸಂಗಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಕೊಪ್ಪಳದಿಂದ ಬೆಂಗಳೂರಿಗೆ ಆಗಮಿಸಿರುವ ಸಂಗಣ್ಣ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ. ಕೊಪ್ಪಳದಿಂದ ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿದ್ದರು. ಈ ಬಾರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...