alex Certify BIG NEWS: ಬಿಜೆಪಿಗೆ ಮತ್ತೊಂದು ಶಾಕ್; ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಗೆ ಮತ್ತೊಂದು ಶಾಕ್; ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಲೇ ಪಕ್ಷಾಂತರ ಪರ್ವ ಜೋರಾಗಿದೆ. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿದ್ದ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಸಂಗಣ್ಣ ಕರಡಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಆಗಿದ್ದರು. ಆದರೆ ಕೊನೇ ಕ್ಷಣದಲ್ಲಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಇದರಿಂದ ಬಿಜೆಪಿ ವಿರುದ್ದ ಸಿಡಿದೆದ್ದಿರುವ ಸಂಗಣ್ಣ ಕರಡಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಇದೇ ವೇಳೆ ಮಾಜಿ ಶಾಸಕ ಹೆಚ್.ಸಿ.ಮಾಳಗಿ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...