alex Certify ‘ಸಂಗೊಳ್ಳಿ ರಾಯಣ್ಣ’ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ : ಹೀಗಿದೆ ‘ಸಿಎಂ ಸಿದ್ದರಾಮಯ್ಯ’ ಭಾಷಣದ ಹೈಲೆಟ್ಸ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಂಗೊಳ್ಳಿ ರಾಯಣ್ಣ’ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ : ಹೀಗಿದೆ ‘ಸಿಎಂ ಸಿದ್ದರಾಮಯ್ಯ’ ಭಾಷಣದ ಹೈಲೆಟ್ಸ್..!

ಬೆಳಗಾವಿ ; ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನಾಲ್ಕನೇ ಸಭೆಯ ಅಧ್ಯಕ್ಷತೆ ವಹಿಸಿ  ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳ ಅನುಷ್ಠಾನಕ್ಕೆ ರೂ. 179.30 ಕೋಟಿ ಟೆಂಡರ್ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಸೈನಿಕ ಶಾಲೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇನ್ನುಳಿದ ಸಿವಿಲ್ ಕಾಮಗಾರಿಗಳನ್ನು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು.

ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿರುವ ರೂ. 30 ಕೋಟಿ ಕಾಮಗಾರಿ ಅನುಷ್ಠಾನ ಕುರಿತು ಜಿಲ್ಲಾಧಿಕಾರಿ ಹಾಗೂ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಪರಿಶೀಲಿಸಿ ವರದಿಯನ್ನು ಸಲ್ಲಿಸಬೇಕು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.67 ಮತ್ತು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಶೇ.33 ರಷ್ಟು ಪ್ರವೇಶಾತಿ ನಿಗದಿಪಡಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ವರ್ಟಿಕಲ್ ಶಾಲೆ ಪ್ರಾರಂಭಿಸುವ ಕುರಿತು ಪರಿಶೀಲನೆ ಮಾಡಬೇಕು.

ಸೈನಿಕ ಶಾಲೆಯಲ್ಲಿ ಖಾಯಂ ಶಿಕ್ಷಕರ ನೇಮಕಾತಿಯ ಕುರಿತು ಪ್ರಸ್ತಾವನೆ ಸಲ್ಲಿಸಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರು ಈ ಪ್ರಾಧಿಕಾರದಿಂದ ಸಂಗೊಳ್ಳಿ ರಾಯಣ್ಣ ಸ್ಮಾರಕಗಳ ಅಭಿವೃದ್ಧಿ, ಸೌಲಭ್ಯ ಕಲ್ಪಿಸುವ ಕುರಿತಂತೆ ನೀಲ ನಕ್ಷೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಈ ಕುರಿತು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುವುದು.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ರೂ.75.29 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಬಹುತೇಕ ಅಂತಿಮ ಹಂತದಲ್ಲಿದ್ದು, ನವೆಂಬರ್ ಎರಡನೇ ವಾರದ ಒಳಗಾಗಿ ಎಲ್ಲಾ ಕಾಮಗಾರಿ ಪೂರ್ಣಗೊಳಿಸಬೇಕು. ನಂದಗಢದಲ್ಲಿ ಕೆರೆ ಅಭಿವೃದ್ಧಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಯ ಕಾಮಗಾರಿಗಳನ್ನೂ ಇದೇ ಗಡುವಿನೊಳಗೆ ಪೂರ್ಣಗೊಳಿಸಬೇಕು.
ಸಂಗೊಳ್ಳಿ ರಾಯಣ್ಣ ಮ್ಯೂಸಿಯಂನ ಕಾಂಪೌಂಡ್ ನಿರ್ಮಾಣಕ್ಕೆ ಅಗತ್ಯವಾದ ಅಂದಾಜು ಪಟ್ಟಿಯನ್ನು ಸಲ್ಲಿಸಬೇಕು.

ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿಯನ್ನು ಈಗಾಗಲೇ ಲೋಕಾರ್ಪಣೆ ಮಾಡಲಾಗಿದ್ದು, ಉತ್ತಮ ಪ್ರವಾಸಿ ತಾಣವಾಗಿ ರೂಪುಗೊಂಡಿದೆ. ಇಲ್ಲಿ ಪ್ರವಾಸಿಗರಿಗೆ ಅನುಕೂಲ ಮಾಡುವ ಉದ್ದೇಶದಿಂದ ಪ್ರವಾಸಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ 2024-25 ನೇ ಸಾಲಿನ ಕ್ರಿಯಾ ಯೋಜನೆ ರೂ. 15.48 ಕೋಟಿಗೆ ಅನುಮೋದನೆ ನೀಡಲಾಗಿದೆ. ಸಂಗೊಳ್ಳಿ ರಾಯಣ್ಣ ಸಾಂಸ್ಕೃತಿಕ ಸಲಹಾ ಸಮಿತಿ ರಚನೆ ಮಾಡಲು ಪ್ರಸ್ತಾವನೆ ಸಲ್ಲಿಸಬೇಕು. ನಂತರ ಕ್ರಮ ವಹಿಸಲಾಗುವುದು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...