alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಸಂಜನಾ ಗಲ್ರಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಸಂಜನಾ ಗಲ್ರಾನಿ

ನಟಿ ಸಂಜನಾ ಗಲ್ರಾನಿ ಇಂದು ತಮ್ಮ 34ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2005 ರಲ್ಲಿ ತೆರೆಕಂಡ ‘ಸೊಗ್ಗಡು’ ಎಂಬ ತೆಲುಗು ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪ್ರವೇಶಿಸಿದ ಸಂಜನಾ ಗಲ್ರಾನಿ 2006 ರಂದು ಸ್ಯಾಂಡಲ್ ವುಡ್ ನಲ್ಲಿ ‘ಗಂಡ ಹೆಂಡತಿ’ ಸಿನಿಮಾದಲ್ಲಿ ಅಭಿನಯಿಸಿದರು. ನಂತರ ನಾಯಕಿ ಸೇರಿದಂತೆ ಅತಿಥಿ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ.

ಕನ್ನಡದ ಬಿಗ್ ಬಾಸ್ ಮೊದಲನೇ ಸೀಸನ್ ನಲ್ಲಿ ಸ್ಪರ್ದಿ ಕೂಡ ಆಗಿದ್ದರು. ಕನ್ನಡ,  ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಕನ್ನಡದಲ್ಲಿ ಕೊನೆಯದಾಗಿ ‘ದಂಡುಪಾಳ್ಯ’ 3 ರಲ್ಲಿ ನಟಿಸಿದ್ದ ಇವರು ಮತ್ಯಾವ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಕಾಲಿವುಡ್ ಚಿತ್ರರಂಗದಲ್ಲೇ ಬಿಜಿಯಾಗಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಅವರ ಸ್ನೇಹಿತರಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...