alex Certify BREAKING NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ; ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ; ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.

ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಸಂಜಯ್ ಪಾಟೀಲ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘ರಾತ್ರಿ ಮಾತ್ರೆ ಜೊತೆ ಎಕ್ಸ್ ಟ್ರಾ ಪೆಗ್ ಹಾಕಬೇಕು’ ಎಂದು ನಾಲಿಗೆ ಹರಿಬಿಟ್ಟಿದ್ದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದು, ಸಂಜಯ್ ಪಾಟೀಲ್ ಗೆ ನೋಟಿಸ್ ಜಾರಿ ಮಾಡಲು ಮುಂದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...