
ಬೆಂಗಳೂರು: ನೌಕರರ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ, ಸಂಜೀವಿನಿ ಕಾರ್ಯಕ್ರಮ ಆದಷ್ಟು ಬೇಗನೆ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೊರೋನಾ ಸಂದರ್ಭದಲ್ಲಿ ಸರ್ಕಾರಿ ನೌಕರರ ವೇತನ ಕಡಿಮೆ ಮಾಡಲಾಗಿತ್ತು. ಆದರೆ, ಆಗ ಸಿಎಂ ಯಡಿಯೂರಪ್ಪ ವೇತನ ಕಡಿತ ಮಾಡದಂತೆ ಸೂಚನೆ ನೀಡಿದ್ದರು. ಯಡಿಯೂರಪ್ಪನವರ ಆಡಳಿತ ನಮಗೆ ಆದರ್ಶವಾಗಿದೆ. ರೈತರು, ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಸರ್ಕಾರ ಒತ್ತು ನೀಡಿದೆ ಎಂದು ಹೇಳಿದ್ದಾರೆ.