
ಜೀ ಕನ್ನಡದ ʼಕಾಮಿಡಿ ಕಿಲಾಡಿʼ ಗಳು ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿದ್ದ ಸಂಜು ಬಸಯ್ಯ ಇತ್ತೀಚೆಗಷ್ಟೇ ವಿವಾಹವಾಗಿದ್ದು, ಜೋಡಿ ನಂಬರ್ ಒನ್ ಕಾರ್ಯಕ್ರಮಕ್ಕೆ ಸೇರ್ಪಡೆಯಾಗುವ ಮೂಲಕ ಮತ್ತೊಮ್ಮೆ ಜೀ ಕನ್ನಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಲವಾರು ಟೀಕೆಗಳನ್ನು ಎದುರಿಸಿ ವಿವಾಹವಾದ ಈ ಜೋಡಿ ಸಂತಸದಿಂದ ತಮ್ಮ ಜೀವನವನ್ನು ನಡೆಸುತ್ತಿದ್ದಾರೆ
ಜೋಡಿ ನಂಬರ್ ಒನ್ ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ ನಂತರ ಸೋಶಿಯಲ್ ಮೀಡಿಯಾದಲ್ಲಿ ಸಂಜು ಬಸಯ್ಯ ಅವರ ಫಾಲೋವರ್ಸ್ ಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ. ತಮ್ಮ ಪ್ರತಿಯೊಂದು ವಿಚಾರವನ್ನು ಹಂಚಿಕೊಳ್ಳುತ್ತಿರುತ್ತಾರೆ.
ಸಂಜು ಬಸಯ್ಯ ಹಾಗೂ ಅವರ ಪತ್ನಿ ಪಲ್ಲವಿ ಬಳ್ಳಾರಿ ತಮ್ಮ ಮನೆಯಲ್ಲಿ ಸರಳವಾಗಿ ಗಣೇಶ ಹಬ್ಬವನ್ನು ಆಚರಿಸಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ನಾಡಿನ ಜನಕ್ಕೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
