ಮನ್ವಿತ್ ಮತ್ತು ರೇಖಾದಾಸ್ ಪುತ್ರಿ ಶ್ರಾವ್ಯ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಸಂಜು’ ಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದ್ದು, ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯ ಅದ್ಭುತವಾಗಿ ಮೂಡಿ ಬಂದಿದ್ದು ವೀಕ್ಷಕರ ಗಮನ ಸೆಳೆದಿದೆ.
ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಯತಿರಾಜ್ ನಿರ್ದೇಶಿಸಿದ್ದು, ಅರುಣ್ ಕುಮಾರ್ ಹಾಗೂ ಸೋನು ಸಾಗರ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ದಿಶಾ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಸಂತೋಷ್ ಡಿಂಕ ಮಹದೇವಪ್ಪ ನಿರ್ಮಾಣ ಮಾಡಿದ್ದು, ಸಂಜೀವ್ ರೆಡ್ಡಿ ಸಂಕಲನ, ವಿದ್ಯಾ ನಾಗೇಶ್ ಛಾಯಾಗ್ರಾಹಣ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಹಾಗೂ ಮದನ್ ಮತ್ತು ಹರಿಣಿ ಅವರ ನೃತ್ಯ ನಿರ್ದೇಶನವಿದೆ. ವಿಜಯ್ ಹರಿತ್ಸ ಸಂಗೀತ ಸಂಯೋಜನೆ ನೀಡಿದ್ದಾರೆ.