alex Certify ಖಾತೆಗೆ ನಗದು ಜಮೆ ಆಗದ ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾತೆಗೆ ನಗದು ಜಮೆ ಆಗದ ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್

ಅನ್ನಭಾಗ್ಯ ಯೋಜನೆ ತಲುಪದ ಪಡಿತರದಾರರಿಗೆ ಆಧಾರ್ ಕೆವೈಸಿ ಅಭಿಯಾನ ಮಾಡುವಂತೆ ಕಾರ್ಮಿಕ ಇಲಾಖೆ ಸಚಿವರಾಗಿರುವ ಕಲಘಟಗಿ ಶಾಸಕ ಸಂತೋಷ್ ಲಾಡ್ ಹೇಳಿದ್ದಾರೆ.

ಅವರು ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಇತರ ಇಲಾಖೆಗಳ ಸಹಯೋಗದಲ್ಲಿ ಕಲಘಟಗಿಯಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅನ್ನಭಾಗ್ಯ ಯೋಜನೆಯ ನೇರ ನಗದು ಹಣ ಜಮೆ ಆಗದ ಪ್ರಕರಣಗಳಲ್ಲಿ ಆಧಾರ್ ಜೋಡಣೆಯ ಮತ್ತು ಬಾಂಕ್ ಹೊಸ ಖಾತೆ ತೆರೆಯಲು ಅನಕೂಲವಾಗುವಂತೆ ಆಯ್ದ ನಗರ ಹಾಗೂ ಗ್ರಾಮೀಣ ನ್ಯಾಯಬೆಲೆ ಅಂಗಡಿಗಳಲ್ಲಿ ಕೆವೈಸಿ ಜೋಡಣೆಯ ಸಲುವಾಗಿ ಜುಲೈ 1 ರಿಂದ 7 ರ ವರೆಗೆ ಸಪ್ತಾಹ ಅಭಿಯಾನ ಆಯೋಜಿಸಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾವು ಸಚಿವರಾದಾಗಿನಿಂದ ವಾರದ ಬಹುತೇಕ ದಿನಗಳನ್ನು ನನ್ನ ಮತಕ್ಷೇತ್ರ ಹಾಗೂ ಜಿಲ್ಲೆಯ ಜನರ ಮಧ್ಯದಲ್ಲಿದ್ದು, ಅವರ ದೂರು, ಅಹವಾಲುಗಳಿಗೆ ಪ್ರತಿದಿನ ಸ್ಪಂದಿಸುತ್ತಿದ್ದೇನೆ. ನಿತ್ಯ ಜನತಾದರ್ಶನ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

ವಿಶೇಷಚೇತನನ ಕಂಡು ಕಣ್ಣಿರಾದ ಸಚಿವರು:

ವಯಸ್ಕ ಮಗ ವಿಶೇಷಚೇತನನಿದ್ದು, ಏಳಲು, ಅಡ್ಡಾಡಲು ಬರುವದಿಲ್ಲ. ಮನೆಯ ಆರ್ಥಿಕ ಸ್ಥಿತಿ ಚನ್ನಾಗಿಲ್ಲ. ಮಗನನ್ನು ಸಾಕಿ, ಸಲುಹಲು ಸಹಾಯ ಮಾಡಿ ಎಂದು ವಿಶೇಷಚೇತನನ ತಾಯಿ ಕಸ್ತೂರಿ ಸೋಮಣ್ಣ ತುಂಬ್ರಿಕೊಪ್ಪ ಅವರು ಜಿಲ್ಲಾಧಿಕಾರಿಗಳ ಜನಸ್ಪಂದನದಲ್ಲಿ ಉಸ್ತುವಾರಿ ಸಚಿವರಲ್ಲಿ ವಿನಂತಿಸಿದರು.

ಅವರ ಪರಿಸ್ಥಿತಿ ನೋಡಿ, ಕಣ್ಣಿರಾದ ಸಚಿವ ಸಂತೋಷ್ ಲಾಡ ಅವರು, ತಮ್ಮ ಫೌಡೇಶನ್ ದಿಂದ ಸಹಾಯ ಮಾಡುವದಾಗಿ ತಿಳಿಸಿದರು. ಆರೋಗ್ಯ, ಅಂಗವಿಕಲ ಕಲ್ಯಾಣ ಇಲಾಖೆಯಿಂದ ಯೋಜನೆಗಳ ಸಹಾಯ ಮಾಡಿಸುವುದಾಗಿ ಭರವಸೆ ನೀಡಿದರು. ಅಗತ್ಯ ಚಿಕಿತ್ಸೆ,

ಔಷಧಿ ನೀಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದರು. ರಾಜ್ಯ ಸರ್ಕಾರ ಕಂದಾಯ ಇಲಾಖೆ ಮೂಲಕ ರೈತರ ದಾಖಲೆಗಳನ್ನು ಡಿಜಿಟಲೀಕರಣ ಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಶೇ.65 ರಷ್ಟು ಆಧಾರ್ ಮತ್ತು ಆರ್.ಟಿ.ಸಿ ಜೋಡಣೆ ಆಗಿದೆ. ಕಲಘಟಗಿ ತಾಲೂಕಿನಲ್ಲಿ ಶೇ.64 ರಷ್ಟು ಆಗಿದೆ. ಉಳಿದ ರೈತರು ಈ ಮಹತ್ವದ ಯೋಜನೆಯಲ್ಲಿ ಭಾಗವಹಿಸಿ, ತಮ್ಮ ಆರ್.ಟಿ.ಸಿ, ಆಧಾರ್ ಜೋಡನೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪೌತಿ ಅಭಿಯಾನ ಆಯೋಜನೆ:  ರೈತರ ಪಹಣಿಗಳಿಗೆ ಆಧಾರ್ ಜೋಡಣೆ ಸಂದರ್ಭದಲ್ಲಿ ಇಲ್ಲಿವರೆಗೆ ಸುಮಾರು 30 ಸಾವಿರ ಪೌತಿ ಖಾತೆಗಳು ಪತ್ತೆ ಆಗಿವೆ. ಅನೇಕ ರೈತರು ನಿಯಮಾನುಸಾರ ಪಹಣಿ ಬದಲಾಯಿಸಿಕೊಳ್ಳದೇ, ಇನ್ನೂ ಪೌತಿ ಆದವರ ಹೆಸರಿನಲ್ಲಿಯೇ ಉಳಿಸಿಕೊಂಡಿದ್ದಾರೆ. ಆದ್ದರಿಂದ ರೈತರ ಅನಕೂಲಕ್ಕಾಗಿ ಜಿಲ್ಲಾಡಳಿತದಿಂದ ಪೌತಿ ಅಭಿಯಾನ ಮಾಡಿ, ಆಯಾ ಗ್ರಾಮಗಳ ಹಂತದಲ್ಲಿ ಪೌತಿ ಖಾತಾ ಬದಲಾವಣೆಗೆ ಅರ್ಜಿ ಸ್ವೀಕರಿಸಲು ಪೌತಿ ಅಭಿಯಾನ ಹಮ್ಮಿಕೋಳ್ಳಲಾಗುವುದು. ರೈತರು ಇದರ ಸದುಪಯೋಗ ಪಡೆಯಬೇಕೆಂದು ಅವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...