ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ತಂದೆಯ ಸಮಾನರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಧಾರವಾಡ ಜಿಲ್ಲೆ ನವಲಗುಂದದ ಮಾಡೆಲ್ ಹೈಸ್ಕೂಲ್ ನಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಬಸವಣ್ಣನವರನ್ನು ಸಾಂಸ್ಕೃತಿಕ ರಾಯಭಾರಿಯಾಗಿ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.
ಶಕ್ತಿ ಯೋಜನೆಯಡಿ ಇದುವರೆಗೆ ಜಿಲ್ಲೆಯ 7.39 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಬಡವರಿಗೆ 58,000 ಕೋಟಿ ಹಣ ಕೊಟ್ಟ ಯಾವ ಮುಖ್ಯಮಂತ್ರಿ ಕೂಡ ಇಲ್ಲ. ಸರ್ಕಾರ ಬೀಳಿಸಲು ಬಿಜೆಪಿ ಹುನ್ನಾರ ನಡೆಸುತ್ತಿದೆ. ನಿಮ್ಮ ಆಶೀರ್ವಾದ ಇರುವವರೆಗೂ ನಮ್ಮ ಸರ್ಕಾರ ಬೀಳುವುದಿಲ್ಲ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.