ಬೆಂಗಳೂರು: ರಾಜ್ಯದಲ್ಲಿ ಕಾರ್ಮಿಕರ ನಕಲಿ ಕಾರ್ಡ್ ಗಳ ಹಾವಳಿಗೆ ಕಡಿವಾಣ ಹಾಕಲು ಜಿಲ್ಲಾವಾರು ಕೇಂದ್ರಗಳನ್ನು ಆರಂಭಿಸಿ ಪರಿಶೀಲನೆ ನಡೆಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಸಿದ್ದು ಸವದಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. 2016ರಲ್ಲಿ 12 ಲಕ್ಷ ಕಾರ್ಮಿಕರ ನೋಂದಣಿಯಾಗಿದ್ದು, ಈಗ 50 ಲಕ್ಷಕ್ಕೂ ಅಧಿಕ ಕಾರ್ಡ್ ಗಳು ನೋಂದಣಿಯಾಗಿದೆ. ಹೀಗಾಗಿ ನಕಲಿ ಕಾರ್ಡ್ ಗಳ ಹಾವಳಿಗೆ ಇಲಾಖೆ ಕಡಿವಾಣ ಹಾಕಲು ಮುಂದಾಗಿದ್ದು, ಜಿಲ್ಲಾವಾರು ಕೇಂದ್ರಗಳನ್ನು ಆರಂಭಿಸಿ ಪರಿಶೀಲನೆ ನಡೆಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.