alex Certify ಬಡ, ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ: ‘ಸಪ್ತಪದಿ ಯೋಜನೆ’ ಮರು ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಡ, ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ: ‘ಸಪ್ತಪದಿ ಯೋಜನೆ’ ಮರು ಜಾರಿ

ಮಂಗಳೂರು: ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಮದುವೆಯ ಆರ್ಥಿಕ ಸಂಕಷ್ಟ ತಪ್ಪಿಸಲು ಜಾರಿಗೊಳಿಸಲಾಗಿದ್ದ ಸಪ್ತಪದಿ ಯೋಜನೆಯನ್ನು ಮುಂದುವರೆಸುವ ಕುರಿತಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದಾರೆ.

ಬೆಳ್ತಂಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ ಸಪ್ತಪದಿ ಯೋಜನೆ ಮುಂದುವರೆಸುವ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.

2021 ರಲ್ಲಿ ಮುಜರಾಯಿ ಇಲಾಖೆ ಬಡ ಮತ್ತು ಮಧ್ಯಮ ವರ್ಗದವರಿಗೆ ಮದುವೆಯ ಆರ್ಥಿಕ ಹೊರೆ ಕಡಿಮೆ ಮಾಡಲು ಸಪ್ತಪದಿ ಸಾಮೂಹಿಕ ವಿವಾಹ ಯೋಜನೆ ಜಾರಿಗೊಳಿಸಿತ್ತು. ಅದನ್ನು ಮರು ಜಾರಿ ಮಾಡುವ ಬಗ್ಗೆ ಸಚಿವರು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...