ಬೆಂಗಳೂರು: ಸರಳ ವಾಸ್ತು ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣದ ಆರೋಪಿ ಮಹಾಂತೇಶ ಶಿರೂರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ವಜಾಗೊಳಿಸಿದೆ. ಜುಲೈ 5, 2022ರಂದು ಸರಳ ವಾಸ್ತು ಚಂದ್ರಶೇಖರ ಗುರೂಜಿಗೆ 56 ಬಾರಿ ಇರಿದು ಕೊಲೆ ಮಾಡಲಾಗಿತ್ತು. ಸಮಾಜದಲ್ಲಿ ಪ್ರಕ್ಷುಬ್ಧತೆ ಸೃಷ್ಟಿ ಮಾಡುವ ಕೃತ್ಯ ಎಸದಿದ್ದಾರೆ. ಘಟನೆಯ ಭೀಕರತೆ ಗಮನಿಸಿದರೆ ಜಾಮೀನು ಅರ್ಜಿ ವಜಾಗೊಳಿಸಲು ಅರ್ಹವಾಗಿದೆ ಎಂದು ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.