alex Certify 2 ಸಾವಿರ ವಾಹನಗಳೊಂದಿಗೆ ಶಶಿಕಲಾ ನಟರಾಜನ್ ಗ್ರ್ಯಾಂಡ್ ಎಂಟ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2 ಸಾವಿರ ವಾಹನಗಳೊಂದಿಗೆ ಶಶಿಕಲಾ ನಟರಾಜನ್ ಗ್ರ್ಯಾಂಡ್ ಎಂಟ್ರಿ

ಚೆನ್ನೈ: ತಮಿಳುನಾಡು ಮಾಜಿ ಸಿಎಂ ಶಶಿಕಲಾ ನಟರಾಜನ್ ಇಂದು ಚೆನ್ನೈಗೆ ತೆರಳಲಿದ್ದಾರೆ. ಸದ್ಯ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೊಡಗುರ್ಕಿ ಸಮೀಪದ ರೆಸಾರ್ಟ್ ನಲ್ಲಿ ತಂಗಿದ್ದಾರೆ.

ಚೆನ್ನೈಗೆ ಅದ್ದೂರಿಯಾಗಿ ಎಂಟ್ರಿ ನೀಡಲು ಶಶಿಕಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಿಂದ ಹೊಸೂರಿಗೆ ಬೆಂಬಲಿಗರೊಂದಿಗೆ 200 ಕಾರುಗಳಲ್ಲಿ ಅವರು ಪ್ರಯಾಣ ಬೆಳೆಸಲಿದ್ದು, ಹೊಸೂರಿನಿಂದ ಚೆನ್ನೈಗೆ 2000 ವಾಹನಗಳೊಂದಿಗೆ ಪ್ರಯಾಣ ಮುಂದುವರೆಸಲಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ಪೂರ್ಣಗೊಳಿಸಿ ಬಿಡುಗಡೆಯಾದ ಶಶಿಕಲಾ ಸೋಮವಾರ ಚೆನ್ನೈಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...