alex Certify BREAKING: ಶಶಿಕಲಾ ನಟರಾಜನ್ ನಾಳೆ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಶಿಕಲಾ ನಟರಾಜನ್ ನಾಳೆ ಬಿಡುಗಡೆ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಿಂದ ನಾಳೆ ವಿ.ಕೆ. ಶಶಿಕಲಾ ನಟರಾಜನ್ ಬಿಡುಗಡೆಯಾಗಲಿದ್ದಾರೆ. ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಆಸ್ತಿ ಗಳಿಕೆ ಪ್ರಕರಣರಣದಲ್ಲಿ 4 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಿಂದ ಮಾಹಿತಿ ನೀಡಲಾಗಿದ್ದು, ಇಂದಿಗೆ ಶಶಿಕಲಾ ಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾಗಲು ಅವರು ಫಿಟ್ ಅಂಡ್ ಫೈನ್ ಆಗಿದ್ದು, ಹೋಂ ಕ್ವಾರಂಟೈನ್ ನಲ್ಲಿ ಇರಲು ತಜ್ಞ ವೈದ್ಯರು ಸಲಹೆ ನೀಡಿದ್ದಾರೆ.

ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ 10 ದಿನಗಳ ಕಾಲ ವಿ.ಕೆ. ಶಶಿಕಲಾ ನಟರಾಜನ್ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಜನವರಿ 27 ರಂದು ಶಶಿಕಲಾ ಜೈಲು ಶಿಕ್ಷೆ ಅಂತ್ಯವಾಗಿ ಜೈಲು ಸಿಬ್ಬಂದಿ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...