ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಮನೆಗೆಲಸ ಮಾಡುತ್ತಿದ್ದ ಒಡಿಶಾದ 17 ವರ್ಷದ ಬಾಲಕಿಯ ಮೇಲೆ 13 ಜನರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಜನವರಿ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಉಳಿದ ಇಬ್ಬರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.”ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಗೆಳೆಯ ಮತ್ತು ಅವನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ, ಘಟನೆ ಬೆಳಕಿಗೆ ಬಂದ ಕೂಡಲೇ ಪೊಲೀಸ್ ಇಲಾಖೆ ಇಬ್ಬರನ್ನು ಹೊರತುಪಡಿಸಿ ಎಲ್ಲಾ ಆರೋಪಿಗಳನ್ನು ಬಂಧಿಸಿದೆ ಎಂದು ಆಂಧ್ರಪ್ರದೇಶ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಬಾಲಕಿ ಒಂಬತ್ತು ತಿಂಗಳ ಹಿಂದೆ ಒಡಿಶಾದಿಂದ ವಿಶಾಖಪಟ್ಟಣಂಗೆ ಬಂದಿದ್ದಳು. ಡಿಸೆಂಬರ್ 17ರಂದು ಆಕೆ ನಾಪತ್ತೆಯಾಗಿದ್ದು, ಒಂದು ದಿನದ ಬಳಿಕ ಆಕೆಯ ತಂದೆ ವಿಶಾಖಪಟ್ಟಣಂನಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿದ್ದು, ವಿವಿಧ ಲಾಡ್ಜ್ ಗಳಲ್ಲಿ 13 ಜನರು ಅವಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.