ಬೆಂಗಳೂರು : ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಶಾಲೆಯಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ.
ಬೆಂಗಳೂರು ನಗರದ ವರ್ತೂರಿನ ಖಾಸಗಿ ಶಾಲೆಯಲ್ಲಿ 10 ವರ್ಷದ ಬಾಲಕಿ ಮೇಲೆ ಕಾಮಾಂಧರು ಅತ್ಯಾಚಾರ ನಡೆಸಿದ್ದಾರೆ. ಶಾಲಾ ಸಂಸ್ಥಾಪಕ, ಪ್ರಾಂಶುಪಾಲ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ನೋವಿನಿಂದ ನರಳುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲು ಮಾಡಿದಾಗ ಈ ವಿಚಾರ ಬಹಿರಂಗವಾಗಿದೆ. ಈ ಕುರಿತು ವರ್ತೂರು ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕಲುಷಿತ ನೀರು ಸೇವಿಸಿದ್ದ ಮತ್ತೋರ್ವ ಮಹಿಳೆ ಸಾವು : ಸಾವಿನ ಸಂಖ್ಯೆ 5 ಕ್ಕೇರಿಕೆ
ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿದ್ದ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 5 ಕ್ಕೇರಿದೆ.
ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 5 ಕ್ಕೇರಿಕೆಯಾಗಿದೆ. ಪಾರ್ವತಮ್ಮ (75) ಎಂಬ ಮಹಿಳೆ ಕಲುಷಿತ ನೀರು ಸೇವಿಸಿ ವಾಂತಿ ಭೇದಿಯಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಹಿನ್ನೆಲೆ 100 ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.
ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಎಇಇ ಸೇರಿ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.ಚಿತ್ರದುರ್ಗದ ನಗರಸಭೆಯ ಎಇಇ, ಜೆಇ ಹಾಗೂ ವಾಲ್ವ್ ಮ್ಯಾನ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.ನಗರಸಭೆಯ ಎಇಇ ಮಂಜುನಾಥ್ ಗಿರಡ್ದಿ, ಜೆಇ ಕಿರಣ್, ವಾಲ್ವ್ ಮ್ಯಾನ್ ಪ್ರಕಾಶಬಾಬು ಅಮಾನತುಗೊಂಡವರು. ಇನ್ನು ಗುತ್ತಿಗೆ ಆಧಾರಿತ ನೌಕರ ನೀರಗಂಟಿ ಸುರೇಶ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.