ನೋಯ್ಡಾದ ಶಾಪಿಂಗ್ ಮಾಲ್ ಬಳಿ 26 ವರ್ಷದ ಯುವತಿಯ ಮೇಲೆ ಐವರು ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಘಟನೆ ಸಂಬಂಧ ಮೂವರು ಶಂಕಿತರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ಸೇರಿದಂತೆ ಇನ್ನಿಬ್ಬರು ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಬ್ಲಾಕ್ ಮೇಲ್ ಮಾಡಿ ಕಿರುಕುಳ ನೀಡಿದ್ದಾರೆ . ಕೆಲವು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 30 ರಂದು ಸಂತ್ರಸ್ತೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.
“ಡಿಸೆಂಬರ್ 30 ರಂದು ಸೆಕ್ಟರ್ 39 ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ, ನಂತರ ತನಿಖೆಯನ್ನು ಕೈಗೆತ್ತಿಕೊಳ್ಳಲಾಯಿತು ಮತ್ತು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಪೊಲೀಸ್ ವಕ್ತಾರರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಬಂಧಿತರನ್ನು ರಾಜ್ ಕುಮಾರ್, ಆಜಾದ್ ಮತ್ತು ವಿಕಾಸ್ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಶಂಕಿತರಾದ ರವಿ ಮತ್ತು ಮೆಹ್ಮಿ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.