ಬೆಂಗಳೂರು: ಪರಿಶಿಷ್ಟ ಸಮುದಾಯದ ಗುತ್ತಿಗೆದಾರರಿಗೆ ಗುತ್ತಿಗೆ ಮೀಸಲು 2 ಕೋಟಿ ರೂ.ಗೆ ಹೆಚ್ಚಳ ಮಾಡಲು ಮುಂದಿನ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ರಾಜ್ಯ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿದ ಸಚಿವರು, ಪರಿಶಿಷ್ಟರಿಗೆ ಮೀಸಲು 1 ಕೋಟಿ ರೂ.ನಿಂದ 2 ಕೋಟಿ ರೂ.ಗೆ ಹೆಚ್ಚಳ ಮಾಡಲು ಮುಖ್ಯಮಂತ್ರಿಗಳು ಒಪ್ಪಿದ್ದು, ಇಲಾಖೆಯಿಂದ ಶಿಫಾರಸು ಕಳಿಸಲಾಗುವುದು ಎಂದು ಹೇಳಿದ್ದಾರೆ.
ಸಂಘದ ಪದಾಧಿಕಾರಿಗಳು ಎಲ್.ಓ.ಸಿ. ಬಿಡುಗಡೆ ಸಂದರ್ಭದಲ್ಲಿ ಮೀಸಲಾತಿ ಅನ್ವಯ, ಕೆ.ಆರ್.ಡಿ.ಎಲ್., ನಿರ್ಮಿತಿ ಕೇಂದ್ರ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದ ಸಂದರ್ಭದಲ್ಲಿ ಕಾಮಗಾರಿ ಮೊತ್ತದ ಶೇ. 30 ರಷ್ಟು ಹಣ ಬಿಡುಗಡೆ ಮಾಡುವ ವ್ಯವಸ್ಥೆಯನ್ನು ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೂ ಅನ್ವಯವಾಗುವಂತೆ ಮಾಡಬೇಕೆಂಬ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ಅಲ್ಲದೇ, ಗುತ್ತಿಗೆ ಕಾಮಗಾರಿ ಬಾಕಿ ಬಿಲ್ ಶೀಘ್ರ ಪಾವತಿಗೆ ಸಂಘದ ಪ್ರತಿನಿಧಿಗಳು ಒತ್ತಾಯಿಸಿದ್ದು, ಅಕ್ಟೋಬರ್ ಅಂತ್ಯದೊಳಗೆ ಬಾಕಿ ಪಾವತಿಸುವುದಾಗಿ ಸಚಿವರು ತಿಳಿಸಿದ್ದಾರೆ.