alex Certify ಬಿಜೆಪಿಯಿಂದ ಹಲವರು ಕಾಂಗ್ರೆಸ್ ಗೆ, ರಮೇಶ್ ಜಾರಕಿಹೊಳಿ ಸೇರ್ಪಡೆ ಹೈಕಮಾಡ್ ಗೆ ಬಿಟ್ಟ ವಿಚಾರ: ಸತೀಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯಿಂದ ಹಲವರು ಕಾಂಗ್ರೆಸ್ ಗೆ, ರಮೇಶ್ ಜಾರಕಿಹೊಳಿ ಸೇರ್ಪಡೆ ಹೈಕಮಾಡ್ ಗೆ ಬಿಟ್ಟ ವಿಚಾರ: ಸತೀಶ್ ಜಾರಕಿಹೊಳಿ

ದಾವಣಗೆರೆ: ಬಿಜೆಪಿಯಿಂದ ಹಲವರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ. ಯಾರೆಲ್ಲಾ ಬರುತ್ತಾರೆ ಎನ್ನುವುದು ಗೊತ್ತಿಲ್ಲ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇದೆ. ಯಾರು ಪಕ್ಷಕ್ಕೆ ಬರುತ್ತಾರೆ ಎಂದು ಖಚಿತವಾಗಿ ಹೇಳಲಾಗುವುದಿಲ್ಲ. ಉತ್ತರಪ್ರದೇಶ ರಾಜ್ಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ರಾಜ್ಯದಲ್ಲಿ ಬಿಜೆಪಿಯಿಂದ ಬಹಳಷ್ಟು ಜನ ಕಾಂಗ್ರೆಸ್ ಪಕ್ಷಕ್ಕೆ ಬರುವವರಿದ್ದಾರೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ಹಲವರು ಬರುತ್ತಾರೆ ಎಂದು ಹೇಳಿದ್ದಾರೆ.

ಉಮೇಶ್ ಕತ್ತಿ ಮತ್ತು ಲಕ್ಷ್ಮಣ ಸವದಿ ಅವರು ನಮ್ಮನ್ನು ಸಂಪರ್ಕಿಸಿಲ್ಲ. ಚುನಾವಣೆ ಘೋಷಣೆಯಾಗುವವರೆಗೆ ಏನೂ ಹೇಳಲಾಗುವುದಿಲ್ಲ. ಶಾಸಕ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಸೇರುವ ವಿಚಾರ ನಮ್ಮ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...