ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಏಪ್ರಿಲ್ 17 ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದೆ.
ಶಾಸಕ ಸತೀಶ್ ಜಾರಕಿಹೊಳಿ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದು, ಸತೀಶ್ ಜಾರಕಿಹೊಳಿ ಅವರಿಗೆ ಒತ್ತಾಯದಿಂದ ಟಿಕೆಟ್ ನೀಡಿ ಕೇಂದ್ರಕ್ಕೆ ಕಳುಹಿಸಲು ಸಂಚು ನಡೆಸಲಾಗಿದೆ. ರಾಜ್ಯದಲ್ಲಿ ಸತೀಶ್ ಅವರಿಗೆ ಹಿಡಿತ ಇಲ್ಲದಂತೆ ಮಾಡಲು ಈ ಮೂಲಕ ಅವರನ್ನು ಮೂಲೆಗುಂಪು ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿಯಾಗಿ ನೋಡುವ ಆಸೆ ಇದೆ. ಹೀಗಾಗಿ ಅವರು ಬೆಳಗಾವಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಎಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಸ್ಪರ್ಧೆ ಖಚಿತವಾಗಿದ್ದು, ರಾಜ್ಯ ಕಾಂಗ್ರೆಸ್ ನಿಂದ ಅವರೊಬ್ಬರ ಹೆಸರನ್ನು ಶಿಫಾರಸು ಮಾಡಲಾಗಿದೆ. ಬಹುತೇಕ ಸತೀಶ್ ಅವರೇ ಅಭ್ಯರ್ಥಿಯಾಗುವುದು ಖಚಿತವಾಗಿದ್ದು, ಹೈಕಮಾಂಡ್ ಕೂಡ ಅವರನ್ನು ಕರೆಸಿಕೊಂಡು ಚರ್ಚೆ ನಡೆಸಿ ಅಧಿಕೃತವಾಗಿ ಉಪ ಚುನಾವಣೆ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗುವುದು ಎನ್ನಲಾಗಿದೆ.