alex Certify ಬಿಜೆಪಿ ವಿರುದ್ಧ ಸತೀಶ್ ಜಾರಕಿಹೊಳಿ ಬೆಂಬಲಿಗರ ಆಕ್ರೋಶ: ತಜ್ಞರ ಸಮಿತಿ ರಚನೆಗೆ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ವಿರುದ್ಧ ಸತೀಶ್ ಜಾರಕಿಹೊಳಿ ಬೆಂಬಲಿಗರ ಆಕ್ರೋಶ: ತಜ್ಞರ ಸಮಿತಿ ರಚನೆಗೆ ಆಗ್ರಹ

ಬಾಗಲಕೋಟೆ: ಹಿಂದೂ ಪದದ ಬಗ್ಗೆ ಹೇಳಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಇದನ್ನು ವಿರೋಧಿಸಿ ಸತೀಶ ಜಾರಕಿಹೊಳಿ ಬೆಂಬಲಿಸಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಾನವ ಬಂಧುತ್ವ ವೇದಿಕೆ, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಸತೀಶ ಜಾರಕಿಹೊಳಿ ಪರವಾಗಿ ಪ್ರತಿಭಟನೆ ನಡೆಸಿದ್ದು, ಮನುವಾದಿಗಳಿಂದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ ಎಂದು ಸತೀಶ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಪದದ ಬಗ್ಗೆ ಉಂಟಾಗಿರುವ ಗೊಂದಲ ಬಗೆಹರಿಸಲು ಸಮಿತಿ ರಚಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಗೆ ಮನವಿ ಮಾಡಲಾಗಿದೆ. ತಜ್ಞರ ಸಮಿತಿ ರಚನೆಗೆ ಒತ್ತಾಯಿಸಿ ಮುಧೋಳ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ರವಾನಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...