
ಬೆಳಗಾವಿ: ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಳ್ಳುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ವಿಶೇಷ ವಾಹನ ಸಿದ್ಧಪಡಿಸಲಾಗಿದ್ದು, ನಾಲ್ಕೈದು ದಿನಗಳಲ್ಲಿ ಸ್ಮಶಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸುತ್ತೇವೆ. ನಾವು ಮೌಲ್ಯಕ್ಕೆ ಒತ್ತು ನೀಡುವುದಿಲ್ಲ. ಬಸವ ತತ್ವ, ಅಂಬೇಡ್ಕರ್, ಬುದ್ಧನ ವಿಚಾರಗಳನ್ನು ಅಳವಡಿಸಿಕೊಂಡು ಮೌಲ್ಯಕ್ಕೆ ಸೆಡ್ಡು ಹೊಡೆದು ಹಲವು ಕಾರ್ಯಕ್ರಮ ಮಾಡಿದ್ದೇವೆ. ಅಂತೆಯೇ ಪ್ರಚಾರ ವಾಹನಕ್ಕೆ ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.