alex Certify ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ, ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ: ಸತೀಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ, ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಳ್ಳುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ವಿಶೇಷ ವಾಹನ ಸಿದ್ಧಪಡಿಸಲಾಗಿದ್ದು, ನಾಲ್ಕೈದು ದಿನಗಳಲ್ಲಿ ಸ್ಮಶಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸುತ್ತೇವೆ. ನಾವು ಮೌಲ್ಯಕ್ಕೆ ಒತ್ತು ನೀಡುವುದಿಲ್ಲ. ಬಸವ ತತ್ವ, ಅಂಬೇಡ್ಕರ್, ಬುದ್ಧನ ವಿಚಾರಗಳನ್ನು ಅಳವಡಿಸಿಕೊಂಡು ಮೌಲ್ಯಕ್ಕೆ ಸೆಡ್ಡು ಹೊಡೆದು ಹಲವು ಕಾರ್ಯಕ್ರಮ ಮಾಡಿದ್ದೇವೆ. ಅಂತೆಯೇ ಪ್ರಚಾರ ವಾಹನಕ್ಕೆ ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...