alex Certify ಅಮಾವಾಸ್ಯೆ ದಿನವೂ ನಾಮಪತ್ರ ಸಲ್ಲಿಕೆ ಭರಾಟೆ: ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಾವಾಸ್ಯೆ ದಿನವೂ ನಾಮಪತ್ರ ಸಲ್ಲಿಕೆ ಭರಾಟೆ: ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಲವು ವಿಶೇಷತೆಗಳಿಗೆ ಕಾರಣವಾಗಿದೆ. ಗುರುವಾರ ಅಮಾವಾಸ್ಯೆ ದಿನ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಅನೇಕ ಅಭ್ಯರ್ಥಿಗಳು ಅಮಾವಾಸ್ಯೆಯಂದೇ ನಾಮಪತ್ರ ಸಲ್ಲಿಸಿದ್ದಾರೆ.

ಕೆಲವು ಕ್ಷೇತ್ರಗಳಿಗೆ ಬುಧವಾರ ತಡರಾತ್ರಿ ಅಭ್ಯರ್ಥಿಗಳು ಘೋಷಣೆಯಾದ ಹಿನ್ನೆಲೆಯಲ್ಲಿ ಅಮಾವಾಸ್ಯೆ ದಿನವೂ ನಾಮಪತ್ರ ಸಲ್ಲಿಸಲಾಗಿದೆ. ಶುಭ ಕಾರ್ಯಗಳಿಗೆ ಅಮಾವಾಸ್ಯೆ, ಗ್ರಹಣ ಸೂಕ್ತವಲ್ಲ ಎಂಬ ಚರ್ಚೆಗಳ ನಡುವೆ ಅನೇಕರು ಕೊನೆ ದಿನವಾದ ಗುರುವಾರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿರುವುದು ವಿಶೇಷವಾಗಿದೆ.

ಯಮಕನಮರಡಿ ಕ್ಷೇತ್ರದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸಿದರು. ಮೆರವಣಿಗೆ ಇಲ್ಲದೆ, ಯಾವುದೇ ಆಡಂಬರವಿಲ್ಲದೆ ಸೂಚಕರೊಂದಿಗೆ ಆಗಮಿಸಿದ ಅವರು ಅಮಾವಾಸ್ಯೆ ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...