
ಬೆಂಗಳೂರು: ಡಾ. ಬಿ.ಆರ್.ಅಂಬೇಡ್ಕರ್ ಕುರಿತು ವಿಡಂಬನಾತ್ಮಕ ನಾಟಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮೇಲಿನ ಕೇಸ್ ರದ್ದುಪಡಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ನೀಡಿದೆ.
ವಿಡಂಬನಾತ್ಮಕ ನಾಟಕಕ್ಕೆ ಸಂವಿಧಾನದ ಆರ್ಟಿಕಲ್ 19ರ ರಕ್ಷಣೆ ಇದೆ. ನಾಟಕದಲ್ಲಿ ದಲಿತ ದೌರ್ಜನ್ಯದ ಉದ್ದೇಶವಿರಲಿಲ್ಲ ಎಂದು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದ್ದು, ವಿದ್ಯಾರ್ಥಿಗಳ ಮೇಲಿನ ಕೇಸ್ ರದ್ದು ಮಾಡಿದೆ.