ನವದೆಹಲಿ: ರಾಜ್ಯದಲ್ಲಿ ಸಚಿವರಿಗೆ ಹನಿಟ್ರ್ಯಾಪ್ ಯತ್ನ ಪ್ರಕರಣದ ಗದ್ದಲ ಆರಂಭವಾಗಿರುವ ನಡುವೆಯೇ ಅತ್ತ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜೊತೆ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿನ್ನೆ ನವದೆಹಲಿಗೆ ತೆರಳಿದ್ದರು. ಈ ವೇಳೆ ರಾತ್ರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ ಅವರಿಗೆ ಡಿನ್ನರ್ ಗೆ ಕರೆದಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ನಿವಾಸದಲ್ಲಿಯೇ ಡಿನ್ನರ್ ಸಭೆ ಆಯೋಜಿಸಲಾಗಿದ್ದು, ಸತೀಶ್ ಜಾರಕಿಹೊಳಿ ಪಾಲ್ಗೊಂಡಿದ್ದಾರೆ. ಅತಿರಥರ ಸಮಾಗಮ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಸತೀಶ್ ಜಾರಕಿಹೊಳಿ, ಕುಮಾರಸ್ವಾಮಿ ಸಭೆ ಕಾಂಗ್ರೆಸ್ ಮಹಾನಾಯಕನ ವಿರುದ್ಧವೇ ವಿರೋಧಿ ಬಣ ಸಮರ ಸಾರಿದೆಯೇ? ಎಂಬ ಪ್ರಶ್ನೆ ಮೂಡಿಸಿದೆ. ಒಟ್ಟಾರೆ ಡಿನ್ನರ್ ಪಾಲಿಟಿಕ್ಸ್ ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದೆ.