
ಬೆಂಗಳೂರು: ಸಿಎಂ ಕುರ್ಚಿಗಾಗಿ ಕಾದಾಟ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿ ಪ್ರತ್ಯೇಕ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸಕ್ಕೆ ಆಗಮಿಸಿದ್ದು, ಕ್ಷೇತ್ರದ ಹಲವು ಮುಖಂಡರೊಂದಿಗೆ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
ಶಿಕಾರಿಪುರದಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಕುಟ್ರಳ್ಳಿ ಟೋಲ್ ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಬಳಿಕ ನಿಮ್ಮ ಜೊತೆ ಮಾತನಾಡಬೇಕು ಎಂದು ಹೇಳಿ ಸಚಿವರೊಂದಿಗೆ ವಿಜಯೇಂದ್ರ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.