alex Certify BIG NEWS: ಆದಷ್ಟು ಬೇಗ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಿ: ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆದಷ್ಟು ಬೇಗ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಿ: ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಹೇಳಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ಲಾಭಿ ಜೋರಾಗಿದೆ. ಸಚಿವರುಗಳೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಾಯಿಸುತ್ತಿದ್ದು, ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆದಷ್ಟು ಬೇಗ ಹೊಸ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದು, ರಾಜ್ಯ ಕಾಂಗ್ರೆಸ್ ನಲ್ಲಿ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಮಾತು ಕೇಳಿಬರುತ್ತಿದೆ. ವೋಟು ತರುವವರನ್ನು ಅಧ್ಯಕ್ಷರನ್ನಾಗಿ ಮಾಡಿ ಎಂದು ನಾನು ಹೇಳಿದ್ದೇನೆ. ನಮಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು. ಹಾಗಾಗಿ ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕವಾಗಬೇಕು ಎಂಬುದು ನಮ್ಮ ಅಭಿಪ್ರಾಯ ಎಂದರು.

ಜಾತಿ ಲೆಕ್ಕಾಚಾರ ಅಥವಾ ಬೇರೇನೂ ಮುಖ್ಯವಲ್ಲ. ವೋಟು ತರುವುದು ಮುಖ್ಯ. ಹಾಗಾಗಿ ಪಾಪ್ಯುಲರ್ ಇರುವವರನ್ನು ಅಧ್ಯಕ್ಷರನ್ನಾಗಿ ಮಾಡಿ. ಯಾರೇ ಅಧ್ಯಕ್ಷರಾದರೂ ವೋಟ್ ತರಬೇಕು ಅಂತವರನ್ನು ನೇಮಕ ಮಾಡಿ ಎಂದು ಸುರ್ಜೇವಾಲಾ ಬಳಿ ಚರ್ಚಿಸಿದ್ದೇನೆ ಎಂದು ಹೇಳಿದರು.

ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಧ್ಯಕ್ಷರ ನೇಮಕವಾಗಬೇಕು. ನನ್ನನ್ನು ಮಾಡಿ ಎಂದು ನಾನು ಹೇಳಿಲ್ಲ. ಡಿ.ಕೆ. ಶಿವಕುಮಾರ್ ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕಾ? ಎಂಬುದು ವರಿಷ್ಠರ ಮಟ್ಟದಲ್ಲಿ ಚರ್ಚೆಯಾಗಬೇಕು. ಡಿ.ಕೆ.ಶಿಯವರೇ ಅಧ್ಯಕ್ಷರಾಗಿ ಇರಬೇಕೋ ಅಥವಾ ಬೇಡವೋ ಎಂಬುದನ್ನು ಹೈಕಮಾಂಡ್ ಸ್ಪಷ್ಟವಾಗಿ ಹೇಳಬೇಕು. ಈಗಿರುವ ಗೊಂದಲಗಳಿಗೆ ಇತಿಶ್ರ‍ೀ ಹಾಡಿ ಎಂದು ಹೇಳಿದ್ದೇನೆ ಎಂದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...