
ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ, ಹಿಂದೂ ಸಂಘಟನೆಗಳಿಗೂ ತಳುಕು ಹಾಕುವುದು ಸರಿಯಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನವಾಗಿದೆ. ವಂಚನೆ ಪ್ರಕರಣಕ್ಕೂ ಹಿಂದೂ ಸಂಘಟನೆಗಳಿಗೂ ತಳುಕು ಹಾಕುವುದು ಸೂಕ್ತವಲ್ಲ ಎಂದರು.
ಚೈತ್ರಾ ಕುಂದಾಪುರ ಹಿಂದೂ ಪರ ಭಾಷಣ ಮಾಡಿರುವುದನ್ನು ನಾನೂ ನೋಡಿದ್ದೇನೆ. ಆದರೆ ವಿಚಾರವನ್ನು ಸಂಘಟನೆಗೆ ಸೇರಿಸುವುದು ಸರಿಯಲ್ಲ. ಇದೊಂದು ಪ್ರತ್ಯೇಕ ಪ್ರಕರಣ ಅಂತಲೇ ಪರಿಗಣಿಸಬೇಕಾಗುತ್ತದೆ ಎಂದು ತಿಳಿಸಿದರು.