alex Certify BIG NEWS: ಡಿಸಿಎಂ ಬಂದರೂ ಸ್ವಾಗತಿಸಲು ಬಾರದ ಸಚಿವರು,ಶಾಸಕರು; ಸತೀಶ್ ಜಾರಕಿಹೊಳಿ ಹೇಳಿದ್ದೇನು? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸಿಎಂ ಬಂದರೂ ಸ್ವಾಗತಿಸಲು ಬಾರದ ಸಚಿವರು,ಶಾಸಕರು; ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್, ಬೆಳಗಾವಿ ಜಿಲ್ಲೆಗೆ ಭೇಟಿ ಕೊಟ್ಟರೂ ಯಾವೊಬ್ಬ ಸಚಿವರು, ಶಾಸಕರು ಅವರನ್ನು ಸ್ವಾಗತಿಸಲೂ ಬಂದಿಲ್ಲ ಎಂಬ ವಿಚಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.

ಇದೀಗ ಈ ವಿಚಾರವಾಗಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿ.ಕೆ.ಶಿವಕುಮಾರ್ ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಳಗಾವಿಗೆ ಬಂದಿದ್ದರು. ನಾನು ಬೆಳಗಾವಿಯಲ್ಲಿ ಇರಲಿಲ್ಲ. ಹಾಗಾಗಿ ಭೇಟಿ ಸಾಧ್ಯವಾಗಿಲ್ಲ ಎಂದರು.

ನಾನು ಡಿ.ಕೆ.ಶಿವಕುಮಾರ್ ಅವರಿಗೆ ಒಂದು ದಿನ ಮುಂಚಿತವಾಗಿಯೇ ಹೇಳಿದ್ದೆ. ನಾನು ಅಂದು ಬೆಳಗಾವಿಯಲ್ಲಿ ಇರಲ್ಲ ಎಂದು. ಬಹಳ ಜನ ಪ್ರವಾಸಕ್ಕೆ ಹೋಗಿದ್ದರು. ಜಿಲ್ಲಾಧ್ಯಕ್ಷರು ಕೂಡ ಪ್ರವಾಸಕ್ಕೆ ಹೋಗಿದ್ದರು. ಹೀಗಾಗಿ ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...