ವಿಶ್ವದ ಎಂಟನೇ ಶ್ರೇಯಾಂಕಿತ ಭಾರತದ ಜೋಡಿಯಾದ ಸಾತ್ವಿಕ್ ಮತ್ತು ಚಿರಾಗ್ ಫ್ರೆಂಚ್ ಓಪನ್ ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ನಲ್ಲಿ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಚೈನೀಸ್ ತೈಪೆಯ ಲೂ ಚಿಂಗ್ ಯೋ ಮತ್ತು ಯಂಗ್ ಪೊ ಹಾನ್ ವಿರುದ್ಧ ಈ ಜೋಡಿ ನೇರ ಗೇಮ್ ನಲ್ಲಿ ಗೆಲುವು ಸಾಧಿಸಿದ್ದಾರೆ.
2019ನೇ ಆವೃತ್ತಿಯ ಫ್ರೆಂಚ್ ಓಪನ್ ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ನಲ್ಲಿ ಈ ಜೋಡಿ ರನ್ನರ್ ಅಪ್ ಸ್ಥಾನ ಪಡೆದುಕೊಂಡಿದ್ದು, ಈ ಬಾರಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.
ಈ ಮೂಲಕ ಇದೇ ಮೊದಲ ಬಾರಿಗೆ ಫ್ರೆಂಚ್ ಓಪನ್ ನಲ್ಲಿ ಭಾರತದ ಜೋಡಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡ ಹಿರಿಮೆಗೆ ಪಾತ್ರವಾಗಿದೆ.