ಕೊಪ್ಪಳ : ವೀರ ‘ಸಾವರ್ಕರ್’ ದೇಶದ ಮೊದಲ ಟೆರರಿಸ್ಟ್ , ರಣ ಹೇಡಿ ಎಂಬಂತಹ ಕೋಮುಭಾವನೆ ಕೆರಳಿಸುವ ಪೋಸ್ಟ್ ಹಾಕಿದ್ದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿ ಎಫ್ ಐ ಆರ್ ದಾಖಲಿಸಿದ್ದಾರೆ.
ಯಲಹಂಕದಲ್ಲಿ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮತ್ತು ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದ ಬೆನ್ನಲ್ಲೇ ಕೊಪ್ಪಳದ ಕುಷ್ಟಗಿ ಜಿಲ್ಲೆಯ ದೋಳಿಹಾಳ ಗ್ರಾಮದಲ್ಲಿ ಹುಸೇನ್ ಬಾಬ್ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಾನೆ. ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಕೋಮುಭಾವನೆ ಕೆರಳಿಸುವ ಪೋಸ್ಟ್ ಹಾಕಿದ ಹಿನ್ನೆಲೆ ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್ಎಸ್ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ಬೆಂಗಳೂರಿನ ಹೊರವಲಯದ ಯಲಹಂಕದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಮೂವರನ್ನು ಬಂಧಿಸಿದ್ದರು. ಬೆಂಗಳೂರಿನ ಹೊರವಲಯದ ಯಲಹಂಕದಲ್ಲಿ ಎನ್ಎಸ್ಯುಐ ಕಾರ್ಯಕರ್ತರು ಸಂಚಾರ ತಡೆ ನಡೆಸಿ ವೀರಸಾವರ್ಕರ್ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ. ನಂತರ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದಾರೆ. ಈ ಬೆನ್ನಲ್ಲೇ ಈ ಘಟನೆ ನಡೆದಿದೆ.