alex Certify ಶಿವಮೊಗ್ಗ ಪಾಲಿಕೆ ಕಚೇರಿಯಲ್ಲಿ ಸಾವರ್ಕರ್ ಫೋಟೋ ಪ್ರತ್ಯಕ್ಷ: ವಿರೋಧಿಸಿದವರಿಗೆ ತಿರುಗೇಟು ನೀಡಿದ ಆಡಳಿತ ಪಕ್ಷದ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ ಪಾಲಿಕೆ ಕಚೇರಿಯಲ್ಲಿ ಸಾವರ್ಕರ್ ಫೋಟೋ ಪ್ರತ್ಯಕ್ಷ: ವಿರೋಧಿಸಿದವರಿಗೆ ತಿರುಗೇಟು ನೀಡಿದ ಆಡಳಿತ ಪಕ್ಷದ ನಾಯಕ

ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ವಿ.ಡಿ. ಸಾವರ್ಕರ್ ಫೋಟೋ ಪ್ರತ್ಯಕ್ಷವಾಗಿದೆ. ಆಡಳಿತ ಪಕ್ಷದ ನಾಯಕ ಎಸ್.ಎನ್. ಚೆನ್ನಬಸಪ್ಪ ಅವರ ಕಚೇರಿಯಲ್ಲಿ ಸಾವರ್ಕರ್ ಫೋಟೋ ಅಳವಡಿಸಲಾಗಿದ್ದು, ಪಾಲಿಕೆಯ ಮೇಯರ್ ಸುನಿತಾ ಅಣ್ಣಪ್ಪ ಮತ್ತು ಉಪಮೇಯರ್ ಶಂಕರ್ ಗನ್ನಿ ಅವರೊಂದಿಗೆ ಚೆನ್ನಬಸಪ್ಪ ಸಾವರ್ಕರ್ ಫೋಟೋ ಅಳವಡಿಸಿ ಪುಷ್ಪ ನಮನ ಸಲ್ಲಿಸಿದ್ದಾರೆ.

ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಗಲಾಟೆ ಆಗಿತ್ತು. ಸಾವರ್ಕರ್ ಫ್ಲೆಕ್ಸ್ ಪರವಾಗಿ ಚೆನ್ನಬಸಪ್ಪ ಪ್ರತಿಭಟನೆ ನಡೆಸಿದ್ದರು. ಇದರ ಮುಂದುವರೆದ ಭಾಗವಾಗಿ ತಮ್ಮ ಕಚೇರಿಯಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ್ದಾರೆ. ಫೋಟೋ ಹಾಕುವ ಮೂಲಕ ವಿರೋಧಿಸಿದವರಿಗೆ ತಿರುಗೇಟು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...