ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 44 ಕೋಟಿ ಗ್ರಾಹಕರಿಗೆ ಹೊಸ ಅಧಿಸೂಚನೆ ನೀಡಿದೆ. ಸೆಪ್ಟೆಂಬರ್ 4 ಮತ್ತು 5 ರಂದು ಕೆಲವು ಗಂಟೆಗಳ ಕಾಲ ಇಂಟರ್ನೆಟ್ ಬ್ಯಾಂಕಿಂಗ್ ಸ್ಥಗಿತಗೊಳ್ಳಲಿದೆ ಎಂದು ಬ್ಯಾಂಕ್ ಹೇಳಿದೆ. ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಜೊತೆ 7 ಬಗೆಯ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಬ್ಯಾಂಕ್ ಹೇಳಿದೆ.
ಸೆಪ್ಟೆಂಬರ್ 4 ರ ರಾತ್ರಿ 11.35 ರಿಂದ ಸೆಪ್ಟೆಂಬರ್ 5 ರ ಮಧ್ಯಾಹ್ನ 1.35 ರವರೆಗೆ ನಿರ್ವಹಣೆ ಚಟುವಟಿಕೆಗಳು ನಡೆಯುತ್ತವೆ. ಈ ಅವಧಿಯಲ್ಲಿ ಇಂಟರ್ನೆಟ್ ಬ್ಯಾಂಕಿಂಗ್, ಯೋನೊ, ಯೋನೊ ಲೈಟ್, ಯೋನೊ ಬಿಸಿನೆಸ್ ಮತ್ತು ಐಎಂಪಿಎಸ್ ಮತ್ತು ಯುಪಿಐ ಸೇವೆಗಳು ಲಭ್ಯವಿರುವುದಿಲ್ಲ ಎಂದು ಬ್ಯಾಂಕ್ ಹೇಳಿದೆ.
ಗ್ರಾಹಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಬ್ಯಾಂಕ್ ಆಗಾಗ ನಿರ್ವಹಣೆ ಕೆಲಸ ಮಾಡುತ್ತದೆ. ಈ ಹಿಂದೆ ಜುಲೈ 16-17ರ ರಾತ್ರಿ ಸೇವೆಗಳು ಸ್ಥಗಿತಗೊಂಡಿದ್ದವು. ಗ್ರಾಹಕರ ಕೆಲಸಕ್ಕೆ ತೊಂದರೆಯಾಗದಿರಲಿ ಎನ್ನುವ ಕಾರಣಕ್ಕೆ ಬ್ಯಾಂಕ್, ಮುಂಚಿತವಾಗಿಯೇ ಈ ಬಗ್ಗೆ ಮಾಹಿತಿ ನೀಡುತ್ತದೆ.