ಪದವೀಧರರು ಅಥವಾ ಫೈನಲ್ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. 2000 ಪ್ರೊಬೆಷನರಿ ಅಧಿಕಾರಿಗಳ ನೇಮಕಾತಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಅರ್ಜಿ ಆಹ್ವಾನಿಸಿದೆ. ನವೆಂಬರ್ 14 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಡಿಸೆಂಬರ್ 4 ರ ವರೆಗೆ ಅರ್ಜಿ ಸಲ್ಲಿಸಬಹುದು.
ಆನ್ಲೈನ್ನಲ್ಲಿ ಪ್ರಿಲಿಮಿನರಿ ಪರೀಕ್ಷೆಗಳು ನಡೆಯಲಿವೆ. ಡಿಸೆಂಬರ್ 31 ರಿಂದ ಜನವರಿ 5 ರವರೆಗೆ ನಾನಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಪ್ರಿಲಿಮ್ಸ್, ಮೇನ್ಸ್, ಸಂದರ್ಶನ ಹೀಗೆ ವಿವಿಧ ಹಂತಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಹೇಳಲಾಗಿದೆ.