ಬೀದರ್: ಬೀದರ್ ಜಿಲ್ಲೆಯಲ್ಲಿ ಬ್ಯಾಂಕ್ ಮತ್ತು ಎಟಿಎಂಗೆ ಕನ್ನ ಹಾಕಿ 25 ಲಕ್ಷ ರೂ.ಗೂ ಅಧಿಕ ಹಣ ಲೂಟಿ ಮಾಡಲಾಗಿದೆ.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಸ್‌ಬಿಐ ಶಾಖೆಯ ತಿಜೋರಿ ಮತ್ತು ಎಟಿಎಂಗೆ ತನ್ನ ಹಾಕಿದ ಕಳ್ಳರು 25.97 ಲಕ್ಷ ರೂಪಾಯಿ ದೋಚಿದ್ದಾರೆ. ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ತೋರಣ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ತಿಜೋರಿ ಕತ್ತರಿಸಿ 18.36 ಲಕ್ಷ ಕಳವು ಮಾಡಲಾಗಿದೆ.
ಬೀದರ್ ಜಿಲ್ಲೆ ಚಿಟಗುಪ್ಪ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂನಿಂದ 7.61 ಲಕ್ಷ ರೂ. ದೋಚಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.