ಬೆಂಗಳೂರು: ಪರಿಶಿಷ್ಟ ಜಾತಿಯ ಕುಟುಂಬದವರು ಮನೆ ನಿರ್ಮಿಸಿಕೊಳ್ಳಲು ನೀಡುವ ಸಹಾಯಧನದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು.
ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಲಾಖೆಯ ಅಧಿಕಾರಿಗಳೊಂದಿಗೆ ವಿಕಾಸಸೌಧದಲ್ಲಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರಸ್ತುತ ಪರಿಶಿಷ್ಟಜಾತಿಯ ಕುಟುಂಬದವರಿಗೆ ಮನೆ ಕಟ್ಟಲು 1.70 ಲಕ್ಷ ರೂಪಾಯಿ ಸಹಾಯಧನ ನೀಡುತ್ತಿದ್ದು, ಈ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು. ಪರಿಶಿಷ್ಟ ಜಾತಿಯವರಿಗೆ ವಸತಿ ಸೌಲಭ್ಯ, ಶೌಚಾಲಯ, ಶುದ್ಧ ಕುಡಿಯುವ ನೀರು, ಆರೋಗ್ಯ, ಶಿಕ್ಷಣ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.