ಬೆಂಗಳೂರು: ‘ಸಪ್ತಪದಿ’ ಮಾದರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ‘ಶುಭ ಲಗ್ನ’ ಉಚಿತ ಸಾಮೂಹಿಕ ವಿವಾಹ ಯೋಜನೆ ಹಮ್ಮಿಕೊಳ್ಳಲು ಮುಂದಾಗಿದೆ.
ಈ ಕ್ರಾಂತಿಕಾರಿ ಯೋಜನೆ ಜಾರಿಯಾದಲ್ಲಿ ರಾಜ್ಯದ ಸುಮಾರು 28 ಲಕ್ಷ ಪರಿಶಿಷ್ಟ ಜಾತಿ, ಉಪಜಾತಿ ಕುಟುಂಬದವರಿಗೆ ಅನುಕೂಲವಾಗಲಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮುಜರಾಯಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಸಪ್ತಪದಿ ಸಾಮೂಹಿಕ ವಿವಾಹ ಯೋಜನೆ ರೂಪಿಸಿದ್ದರು. ಈಗ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಎಸ್.ಸಿ. ಸಮುದಾಯಕ್ಕೆ ಅನುಕೂಲವಾಗುವಂತೆ ಶುಭ ಲಗ್ನ ಯೋಜನೆ ಜಾರಿಗೆ ಮುಂದಾಗಿದ್ದಾರೆ.
ಸರ್ಕಾರವೇ ವಿವಾಹ ಯೋಜನೆಯನ್ನು ರೂಪಿಸಿದ್ದು, ಶೀಘ್ರವೇ ಯೋಜನೆ ಜಾರಿಗೆ ಉದ್ದೇಶಿಸಲಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ ಶುಭ ಲಗ್ನ ಸಾಮೂಹಿಕ ವಿವಾಹ ಏರ್ಪಡಿಸಿ ಪರಿಶಿಷ್ಟ ಜಾತಿ, ಉಪಜಾತಿ ಕುಟುಂಬದವರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.