alex Certify ಮೂರನೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದವನಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂರನೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದವನಿಗೆ ಬಿಗ್ ಶಾಕ್

ನವದೆಹಲಿ: ತ್ರಿವಳಿ ತಲಾಖ್ ನೀಡಿದ ಆರೋಪಿಗೆ ಜಾಮೀನು ನಿರಾಕರಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ಇಬ್ರಾಹಿಂ ಮೊಹಮ್ಮದ್ ಇಕ್ಬಾಲ್ ಲಕಡಾವಾಲಾ ಎಂಬಾತ ಮೂರನೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದು, ಆತನ ವಿರುದ್ಧ ವಿವಿಧ ಆರೋಪ ಮಾಡಿದ್ದ ಪತ್ನಿ ಆಗಸ್ಟ್ 24 ರಂದು ಮುಂಬೈನ ಅಂಬೋಲಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಅಕ್ಟೋಬರ್ 21 ರಂದು ಬಾಂಬೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಇಬ್ರಾಹಿಂ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ, ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಆಕ್ಟೊಬರ್ 21 ರಂದು ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...