ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖವಾದ ಆಧಾರ್ ಕಾರ್ಡ್ ಯೋಜನೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆಧಾರ್ ಕಾರ್ಡ್ ಸಿಂಧುತ್ವದ ಬಗ್ಗೆ ಪ್ರಶ್ನಿಸಿದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಆಧಾರ್ ಕುರಿತಾಗಿ ಸುಪ್ರೀಂಕೋರ್ಟ್ 2018 ರಲ್ಲಿ ಸಾಂವಿಧಾನಿಕವಾಗಿ ಮಾನ್ಯವೆಂದು ನೀಡಿದ್ದ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ, ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್, ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಲ್. ನಾಗೇಶ್ವರರಾವ್ ಅವರನ್ನೊಳಗೊಂಡ ನ್ಯಾಯಾಧೀಶರ ಪೀಠದಿಂದ 2018 ರ ಸೆಪ್ಟಂಬರ್ 26 ರಂದು ನೀಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಮನವಿ ಆಲಿಸಲಾಗಿದೆ. ನ್ಯಾ. ಚಂದ್ರಚೂಡ್ ಅವರು ಬಹುಮತದ ಆಧಾರದ ಮೇಲೆ ನೀಡಿದ ಆದೇಶದ ಕುರಿತಾಗಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.