ಬೆಂಗಳೂರು : ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು .
ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಯನ್ನು ಜಾರಿಗೆ ಕೊಟ್ಟು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ನ ಅಭಿವೃದ್ಧಿ ಅನುದಾನದಲ್ಲಿ ಮೀಸಲಿಟ್ಟಿದ್ದು ನಾವು. ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದ್ದೇವೆ.
ಒಂದು ಕೋಟಿ ರೂಪಾಯಿ ವರೆಗಿನ ಸರ್ಕಾರಿ ಗುತ್ತಿಗೆಗಳಲ್ಲಿ ಎಸ್ ಸಿ ಮತ್ತು ಎಸ್ ಟಿ ಸಮುದಾಯದ ಗುತ್ತಿಗೆದಾರರಿಗೆ ಶೇಕಡಾ 24.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಅನ್ವಯಿಸಲು ನಿರ್ಧರಿಸಲಾಗಿದೆ. ಎಸ್ ಸಿ/ಎಸ್ ಟಿ ಕುಟುಂಬಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನುಗಳ ಅನಧಿಕೃತ ಪರಭಾರೆಯನ್ನು ತಡೆಯಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಹಂಚಿಕೆಯಾಗುವ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ಸಹಾಯಧನ ನೀಡಲಾಗುತ್ತಿದೆ. ಇವೆಲ್ಲವೂ ಅನುಷ್ಠಾನಕ್ಕೆ ಬಂದಿರುವುದು ಕರ್ನಾಟಕದಲ್ಲಿ ಮಾತ್ರ. ಕಳೆದ ಹತ್ತು ವರ್ಷದಿಂದ ಕೇಂದ್ರದಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆ ಜಾರಿ ಮಾಡುವಂತೆ ಒತ್ತಾಯ ಮಾಡುತ್ತಲೇ ಇದ್ದೇನೆ, ಪ್ರಧಾನಿ ಮೋದಿ ಅವರು ಇದನ್ನು ತಿರಸ್ಕರಿಸುತ್ತಲೇ ಇದ್ದಾರೆ. ದಲಿತ ಸಮುದಾಯದ ಬಗ್ಗೆ ದೊಡ್ಡ ದೊಡ್ಡ ಮಾತನಾಡುವ ಬಿಜೆಪಿ ನಾಯಕರ ದಲಿತ ಕಾಳಜಿ ಇದು. ಹೀಗಿದ್ದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಮ್ಮ ಸರ್ಕಾರವನ್ನು ಪ್ರಶ್ನಿಸುವುದು ನಾಚಿಕೆಗೇಡು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು .