alex Certify BIG NEWS: ಜಾತಿಗಣತಿ ಬಗ್ಗೆ ಸರ್ಕಾರದಿಂದ ಮಹತ್ವದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಾತಿಗಣತಿ ಬಗ್ಗೆ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹೊರತುಪಡಿಸಿ ಉಳಿದ ಜಾತಿಗಣತಿ ಇಲ್ಲವೆಂದು ಕೇಂದ್ರ ಸರ್ಕಾರ ಲೋಕಸಭೆಗೆ ಸ್ಪಷ್ಟಪಡಿಸಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಈ ಬಗ್ಗೆ ಮಾಹಿತಿ ನೀಡಿದ್ದು, ಎಸ್ಸಿ,ಎಸ್ಟಿ ಹೊರತುಪಡಿಸಿ ಇತರೆ ಜನಸಂಖ್ಯೆಯ ಜಾತಿ ಗಣತಿಯನ್ನು ನಡೆಸದಿರಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹೊರತುಪಡಿಸಿ ಉಳಿದ ಜಾತಿಗಳ ಗಣತಿ ಮಾಡದಿರಲು ತೀರ್ಮಾನಿಸಲಾಗಿದೆ.

ಒಡಿಶಾ, ಮಹಾರಾಷ್ಟ್ರ ಸರ್ಕಾರಗಳು ಮುಂದಿನ ಜನಗಣತಿಯಲ್ಲಿ ಜಾತಿಯ ಕುರಿತು ವಿವರಗಳನ್ನು ಸಂಗ್ರಹಿಸಬೇಕೆಂದು ಮನವಿ ಮಾಡಿವೆ. ನೀತಿಗೆ ಅನುಗುಣವಾಗಿ ಭಾರತ ಸರ್ಕಾರ ಇತರ ಜನಸಂಖ್ಯೆಯ ಜಾತಿವಾರು ಜನಗಣತಿಯನ್ನು ಮಾಡದಿರಲು ನಿರ್ಧರಿಸಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...