ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಮೀಸಲಾತಿ ಹೆಚ್ಚಳ ಮಾಡಿ ಸಿಹಿ ಸುದ್ದಿ ಕೊಡುತ್ತೇವೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಮೀಸಲಾತಿ ವಿಚಾರದಲ್ಲಿ ಬದ್ಧತೆ ಪ್ರದರ್ಶಿಸುತ್ತಿದೆ. ಮೀಸಲಾತಿಗಾಗಿ ಹೋರಾಟ ಮಾಡುವವರು ಕುಣಿದಾಡುವಂತೆ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಸರ್ಕಾರ ಮಾಡಲಿದೆ ಎಂದು ಹೇಳಿದ್ದಾರೆ.
ಎಸ್.ಸಿ. ಸಮುದಾಯಕ್ಕೆ ಶೇ. 17 ರಷ್ಟು, ಎಸ್.ಟಿ. ಸಮುದಾಯಕ್ಕೆ ಶೇ. 7.5 ರಷ್ಟು ಮೀಸಲಾತಿ ಹೆಚ್ಚಿಸುತ್ತೇವೆ. ಈ ಮೂಲಕ ಸಿಹಿ ಸುದ್ದಿ ಕೊಡುತ್ತೇವೆ. ಈ ಕೆಲಸವನ್ನು ಆದಷ್ಟು ಶೀಘ್ರವೇ ಮಾಡಲಾಗುವುದು ಎಂದ ಹೇಳಿದ ಅವರು, ಇಷ್ಟು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದವರನ್ನು ವೋಟ್ ಬ್ಯಾಂಕ್ ಆಗಿ ಮಾಡಿಕೊಂಡಿತ್ತು ಎಂದು ಆರೋಪಿಸಿದ್ದಾರೆ.