ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗೆ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ಮುಂದಾಗಿದೆ.
ಶಿಕ್ಷಣ ಮತ್ತು ಉದ್ಯೋಗದಲ್ಲಿ ತಕ್ಷಣದಿಂದಲೇ ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಾತಿ ಕಲ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸಲಾಗುವುದು. ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಎಸ್ಸಿ ಮೀಸಲಾತಿ ಪ್ರಮಾಣವನ್ನು ಶೇ. 15 ರಿಂದ 17 ಕ್ಕೆ ಹೆಚ್ಚಳ ಮಾಡಲಾಗಿದೆ. ಎಸ್.ಟಿ. ಮೀಸಲಾತಿಯನ್ನು ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಳ ಮಾಡಲಾಗಿದ್ದು, ಮುಂದಿನ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದರು.
ಶಿಕ್ಷಣ ಮತ್ತು ಉದ್ಯೋಗದಲ್ಲಿ ತಕ್ಷಣದಿಂದಲೇ ಮೀಸಲಾತಿ ನೀಡಲು ಸುಗ್ರೀವಾಜ್ಞೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.