ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಕಳೆದ 240 ದಿನಗಳಿಂದ ನಡೆಸುತ್ತಿದ್ದ ಸತ್ಯಾಗ್ರಹ ಕೈಬಿಟ್ಟಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಖುದ್ದಾಗಿ ಭೇಟಿಯಾದ ಶ್ರೀಗಳು ಅಭಿನಂದನೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗಳು ಸದನದ ನಾಯಕರ ಸಭೆ ಕರೆದು, ಸಂಪುಟ ಸಭೆ ನಡೆಸಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ 151 ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದಂತಾಗಿದೆ. ಇದಕ್ಕೆ ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಎಂದು ಹೇಳಿದ್ದಾರೆ.
ಅ. 9 ರಂದು ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹ ಅಂತ್ಯಗೊಳಿಸಿದ್ದು, ವಾಲ್ಮೀಕಿ ಜಯಂತಿಯನ್ನು ವಿಜಯೋತ್ಸವವಾಗಿ ಆಚರಿಸುತ್ತೇವೆ ಎಂದು ಹೇಳಿದ್ದಾರೆ.