
ಧಾರವಾಡ: ಪ್ರತಿಭಾವಂತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿರುವ 6ನೇ ತರಗತಿ ವಿದ್ಯಾರ್ಥಿಗಳನ್ನು ಧಾರವಾಡ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಕಲ್ಪಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಮೇ 21, 2024 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯನ್ನು ಪ್ರವೇಶ ಪರೀಕ್ಷೆ ಮೂಲಕ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಸೌಲಭ್ಯ, ಸಮವಸ್ತ್ರ, ಪಠ್ಯ ಪುಸ್ತಕ ಇನ್ನಿತರೇ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಧಾರವಾಡ ಜಿಲ್ಲೆ, ಡಿಸಿ ಕಂಪೌಂಡ ಧಾರವಾಡ ಮತ್ತು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಗ್ರೇಡ್-1/2, ರವರ ಕಚೇರಿಯಿಂದ ಪಡೆಯುವುದು ಮತ್ತು ಆಯಾ ತಾಲ್ಲೂಕುಗಳಿಗೆ ಸಲ್ಲಿಸುವುದು ಎಂದು ಹೇಳಲಾಗಿದೆ.