ನವದೆಹಲಿ: ಕಿರುಕುಳ ಪ್ರಕರಣದ ಎಫ್‌ಐಆರ್ ವಿರುದ್ಧ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಸಲ್ಲಿಸಿರುವ ಅರ್ಜಿಯನ್ನು ಮೇ 15 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
ಪಕ್ಷದಿಂದ ಉಚ್ಛಾಟಿತರಾದ ಮಹಿಳಾ ಅಧ್ಯಕ್ಷೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಪ್ರಕರಣದ ಬಗ್ಗೆ ಗುವಾಹಟಿ ಹೈಕೋರ್ಟ್‌ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಶ್ರೀನಿವಾಸ್ ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರ ಪೀಠವು ಪ್ರಕರಣವನ್ನು ಮೇ 15 ರಂದು ವಿಚಾರಣೆಗೆ ಪಟ್ಟಿ ಮಾಡಲು ಒಪ್ಪಿಕೊಂಡಿತು.
ತನಗೆ ಮಾನಸಿಕ ಯಾತನೆ ನೀಡಿದ್ದಾರೆ ಎಂದು ಆರೋಪಿಸಿ ಅಸ್ಸಾಂ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸಲ್ಲಿಸಿದ್ದ ಪ್ರಕರಣದಲ್ಲಿ ಶ್ರೀನಿವಾಸ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗೌಹಾಟಿ ಹೈಕೋರ್ಟ್ ಮೇ 5 ರಂದು ತಿರಸ್ಕರಿಸಿತು. ಎಫ್‌ಐಆರ್ ರದ್ದುಗೊಳಿಸಲು ಕೂಡ ಹೈಕೋರ್ಟ್ ನಿರಾಕರಿಸಿತ್ತು.
ಕಾಂಗ್ರೆಸ್ ಪಕ್ಷವು ಮಹಿಳೆಗೆ ಶೋಕಾಸ್ ನೋಟಿಸ್ ನೀಡಿತ್ತು. ಮತ್ತು ನಂತರ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅವರನ್ನು ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಿತು.