
ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಲಾಗಿದೆ.
ಮೊದಲ ಹಂತದಲ್ಲಿ ಶನಿವಾರ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಅಪ್ಲೋಡ್ ಮಾಡಲಾಗಿದೆ. ಸ್ಕ್ಯಾನ್ ಪ್ರತಿಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 27 ಕೊನೆಯ ದಿನವಾಗಿತ್ತು. ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಹಂತ ಹಂತವಾಗಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಅಪ್ಲೋಡ್ ಮಾಡಲಾಗುವುದು ಎಂದು ಮಂಡಳಿ ತಿಳಿಸಿದೆ.